ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್, 05 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://bcwd.karnataka.gov.in/ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ರೂ. 8 ಲಕ್ಷ ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗೆ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.