ಬೆಳಗಾವಿ: ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 10-20 ಕಿಮೀಗೆ ಒಂದರಂತೆ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಲು ತೀರ್ಮಾನಿಸಿದೆ .
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಮಧು ಬಂಗಾರಪ್ಪ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಉತ್ತರ ನೀಡಿದರು
ಗ್ರಾಮಾಂತರ ಪ್ರದೇಶಗಳಲ್ಲಿನ ಶೈಕ್ಷಣಿಕ ವಾತಾವರಣ ಉತ್ತಮಪಡಿಸುವ ಉದ್ದೇಶದಿಂದ ಪ್ರತಿ 10-20 ಕಿಮೀಗೆ ಒಂದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗುತ್ತಿದೆ. ಎಂದರು. ಖಾಸಗಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಮಾನದಂಡ ರೂಪಿಸಲಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಯಾವುದೇ ನಿಖರವಾದ ಮಾನದಂಡಗಳು ಇಲ್ಲ ಎಂದರು, ರಾಜ್ಯ ಸರ್ಕಾರ 47 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದೆ. ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಕ್ರಮವಹಿಸಲಾಗುತ್ತಿದೆ ಎಂದು ಅವರು ಹೇಳಿದರು.