ಬೆಂಗಳೂರು : ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.