ಬೆಂಗಳೂರು : ವಿವಿಧ_ತಾಲ್ಲೂಕು_ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಪ್ರಸಕ್ತ ಸಾಲಿನ ವೇತನ ವೇತನೇತರ ಹೊರಗುತ್ತಿಗೆ ನೌಕರರ ವೇತನ ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.
ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.4899.39 ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.4899.39ಲಕ್ಷ (ರೂಪಾಯಿ ನಾಲ್ಕು ಸಾವಿರದ ಎರಡು ನೂರ ತೊಂಬತ್ತೊಂಬತ್ತು ಲಕ್ಷದ ಮೂವತ್ತೊಂಬತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.