ಸಾಗರ : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಬಗ್ಗೆ ಕೆಲವು ಕಡೆಗಳಲ್ಲಿ ಸಮಸ್ಯೆ ಇದ್ದು, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ವಹಿಸಿದ್ದೇನೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕ ಹುದ್ದೆಗೆ ಮಂಜೂರಾತಿ ದೊರಕಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಹೊರೆಯಾಗದಂತೆ ಪುಸ್ತಕದ ಹೊರೆ ಇಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು, ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಜ್ಞರ ಅಭಿಪ್ರಾಯ ಪಡೆಯಲಾಗಿದೆ ಎಂದು ಹೇಳಿದ್ದಾರೆ.