ಬೆಳಗಾವಿ : ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬಿಜೆಪಿಯ ಎಸ್. ವಿ. ಸಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ 41,913 ಪ್ರಾಥಮಿಕ ಶಾಲೆಗಳಲ್ಲಿ 6,772 ದೈಹಿಕ ಶಿಕ್ಷಕ ಹುದ್ದೆ ಮಂಜೂರಾಗಿದ್ದು, 4,127 ಹುದ್ದೆಗಳು ಭರ್ತಿಯಾಗಿವೆ. ಅದೇ ರೀತಿ 4,844 ಪ್ರೌಢಶಾಲೆಗಳಲ್ಲಿ 5,120 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದರು.