![](https://kannadadunia.com/wp-content/uploads/2022/01/07-1444194258-teacher345-22.jpg)
ಬೆಂಗಳೂರು : ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 7,500 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದೆ.
ಶಿಕ್ಷಣ ಇಲಾಖೆಯುವು ರಾಜ್ಯದಲ್ಲಿ ಹೊಸದಾಗಿ 7,500 ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಿದ್ಧತೆ ನಡೆಸಿದ್ದು, ಶೀಘ್ರವೇ ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ. 10,000ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಒಟ್ಟಾರೆ 50 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿ ಇದ್ದು ಸದ್ಯ 7,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಇದರಲ್ಲಿ 13,352 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ನ್ಯಾಯಾಲಯದಲ್ಲಿರುವ ಪ್ರಕರಣ ಹೊರತುಪಡಿಸಿ 12,415 ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ.
ಮುಂದಿನ ಶೈಕ್ಷಣಿಕ ಅವಧಿಗೆ ಹೊಸದಾಗಿ 5,000 ಶಿಕ್ಷಕರ ಕೊರತೆ ಎದುರಾಗುವುದರಿಂದ 2023ರ ಸಾಲಿನಲ್ಲಿ ನಿವೃತ್ತಿಯಿಂದ ತೆರವಾಗುವ 4985 ಖಾಲಿ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.