alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಮತ್ತೆ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023-24 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಈ ಕೆಳಕಂಡಂತೆ ಒಟ್ಟು 10,000 ಅತಿಥಿ ಶಿಕ್ಷಕರುಗಳನ್ನು ಹೆಚ್ಚುವರಿಯಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 8000
ಸರ್ಕಾರಿ ಪ್ರೌಢಶಾಲೆಗಳಲ್ಲಿ2000 = 10,000

ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರುಗಳು ಕೌನ್ಸಿಲಿಂಗ್ ಮೂಲಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೌನ್ಸಿಲಿಂಗ್ ಮುಖಾಂತರ ಖಾಲಿಯಾಗಿರುವ ಹುದ್ದೆಗಳನ್ನು ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ, ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಪೂರ್ಣ ಪುಮಾಣದಲ್ಲಿ ಅತಿಥಿ ಶಿಕ್ಷಕರಿಂದ ಭರ್ತಿ ಮಾಡಲು ಕ್ರಮವಹಿಸುವುದು.

ಮೇಲ್ಕಂಡಂತೆ 2023-24 ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಒಟ್ಟು 10000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ ತಾಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ ಆಇ 323 ವೆಚ್ಚ-8/2022(ಭಾಗ-1), ದಿನಾಂಕ:15.08.2023 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಗಳು ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...