ಬೆಂಗಳೂರು : ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ಹಿಂದೆ ನೇಮಕ ಮಾಡಲಾಗಿದ್ದ 13,500 ಶಿಕ್ಷಕರ ನೇಮಕ ನ್ಯಾಯಲಯದಲ್ಲಿದ್ದು, ಆದಷ್ಟು ಬೇಗ ಇತ್ಯರ್ಥವಾಗುವ ನಿರೀಕ್ಷೆ ಇದೆ. ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಈ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.