![](https://kannadadunia.com/wp-content/uploads/2023/06/madhu-bangarappa-01.jpg)
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧುಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಹಾಗೂ ಬಿಜೆಪಿಯ ಎಸ್.ವಿ. ಸಂಕನೂರು ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಅನುದಾನಿತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ ಮರಣ ಹಾಗೂ ಇತರೆ ಕಾರಣಗಳಿಂದ 2015 ರ ಡಿಸೆಂಬರ್ 31 ರವರೆಗೆ ತೆರವಾಗಿರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು 2016 ರಿಂದ 2020 ರವರೆಗೆ ಖಾಲಿ ಇರುವ ಬೋಧ ಹುದ್ದೆಗಳ ಭರ್ತಿಗೆ ಆರ್ಥಿಯ ಇಲಾಖೆಗೆ ಒಪ್ಪಿಗೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.