ಬೆಂಗಳೂರು : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಸಬಿ ಹಂಚಿನಾಳ ಗ್ರಾಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಮುಂದಿನ ದಿನಗಳಲ್ಲಿ 20, 000 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.
40 ಸಾವಿರ ಶಿಕ್ಷಕರ ಕೊರತೆಯಿದ್ದು, ಸದ್ಯಕ್ಕೆ 20 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ. ಮುಂದಿನ 3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಆರಂಭಿಸುತ್ತೇವೆ.ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸಲು ಹೈಕಮಾಂಡ್ ಕೂಡ ನನಗೆ ಸಲಹೆ ನೀಡಿದೆ ಎಂದರು.