alex Certify ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ‘ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ‘ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಮೂಲಕ ಚಾಲಕರು ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ವೆಬ್ಸೈಟ್ https://sevasindhu.karnataka.gov.in/Sevasindhu/Kannada ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...