alex Certify BIG NEWS : ‘ಕಟ್ಟಡ ಕಾರ್ಮಿಕ’ರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ಸಹಾಯಧನ’ ಪರಿಷ್ಕರಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಕಟ್ಟಡ ಕಾರ್ಮಿಕ’ರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ಸಹಾಯಧನ’ ಪರಿಷ್ಕರಿಸಿ ಆದೇಶ

ಬೆಂಗಳೂರು  : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿನೀಡಿದ್ದು, ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 (ಕೇಂದ್ರ ಕಾಯ್ದೆ 1996ರ ಸಂಖ್ಯೆ 27)ರ ಕಲಂ 62ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ’ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕರ್ನಾಟಕ ನಿಯಮಗಳು 2006ರ ನಿಯಮ 45(1) ರಡಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮೊತ್ತಗಳನ್ನು ಶೈಕ್ಷಣಿಕ ವರ್ಷ 2023-24 ರಿಂದ ಅನ್ವಯವಾಗುವಂತೆ, ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ.

ವಿಶೇಷ ಸೂಚನೆಗಳು :

1. ಸಹಾಯಧನದ ಮೊತ್ತವು ಶೈಕ್ಷಣಿಕ ವರ್ಷ 2023-24ನೇ ಸಾಲಿನಿಂದ ಅನ್ವಯವಾಗುತ್ತದೆ.
2. ಶೈಕ್ಷಣಿಕ ಸಹಾಯಧನ ಕೋರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿಯನ್ನು ಪಡೆದಿರಬೇಕು.
3. ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ನೋಂದಣಿ ಸದಸ್ಯತ್ವವು ಚಾಲ್ತಿಯಲ್ಲಿರುಬೇಕು.
4. ಶೈಕ್ಷಣಿಕ ವರ್ಷದ ಪೂರ್ವದ ಮೇ-31ರ ಒಳಗೆ ನೋಂದಣಿಯಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಾತ್ರ ನಂತರದ ಶೈಕ್ಷಣಿಕ ವರ್ಷದ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
5. ಈ ಮೇಲಿನ ಪಟ್ಟಿಯಲ್ಲಿ ನಿಗದಿಪಡಿಸದಿರುವ ತರಗತಿಗಳಿಗೆ ಅದೇ ಅವಧಿಯ ತತ್ಸಮಾನ ವ್ಯಾಸಂಗಕ್ಕೆ ಇರುವ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಅರ್ಹರಿರುತ್ತಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...