ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿ ಸುದ್ದಿ ನೀಡಿದ್ದು, ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇರುವುದು ನಿಜ, ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ, ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ರೈತರಿಗೆ ತೊಂದರೆಯಾಗದಂತೆ , ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ರೈತರಿಗೆ ತೊಂದರೆಯಾಗದಂತೆ ಸರ್ಕಾರ ವ್ಯವಸ್ಥೆ ಮಾಡಲಿದೆ ಎಂದು ಸಿಎಂ ಹೇಳಿದರು.
ಇನ್ನೂ, ವಿದ್ಯುತ್ ಉತ್ಪಾದನೆ ಕಡಿಮೆ ಆಗಿರುವುದರಿಂದ ಲೋಡ್ ಶೆಡ್ಡಿಂಗ್ ಮಾಡಲಾಗಿದೆ. ವಾರದೊಳಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಲಲಾಗುವುದು. ಮಳೆ ಅಭಾವದಿಂದಾಗಿ ಸದ್ಯ ಬೆಳೆ ಉಳಿಸಿಕೊಳ್ಳಲು ವಿದ್ಯತ್ ಅವಶ್ಯವಿದ್ದು, ರೈತರಿಗೆ ಪರಿಹಾರ ನೀಡಲಾಗುವುದು, ಲೋಡ್ ಶೆ್ಡ್ಡಿಂಗ್ ಸಮಸ್ಯೆ ವಾರದೊಳಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.