ಬೆಳಗಾವಿ : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬತೆ ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು ಬ್ಯಾಂಕ್ ಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ರೈತರ ಸಾಲ ಮರುಪಾವತಿ ಅವಧಿ ಪರಿವರ್ತಿಸಲು ಕ್ರಮ ವಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
“ರೈತರ ಸಾಲ ಮರುಪಾವತಿ ಅವಧಿ ಪರಿವರ್ತಿಸಲು ಕ್ರಮ ವಹಿಸಲಾಗಿದೆ. ಅಲ್ಪಾವಧಿ ಸಾಲವನ್ನು ಮಧ್ಯಮಾವಧಿಗೆ, ಮಧ್ಯಮಾವಧಿ ಸಾಲವನ್ನು ದೀರ್ಘಾವಧಿಗೆ ಪರಿವರ್ತಿಸುವಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಬರ ಪರಿಹಾರದ ಮೊದಲ ಕಂತು 2,000 ರೂ ಹಣ ಡಿಬಿಟಿ ಮಾಡುವ ಕಾರ್ಯಕ್ರಮಕ್ಕೆ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.