ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ, ಬೆಳೆಯಲು ಇಚ್ಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತ ಫಲಾನುಭವಿಗಳಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
*ಯೋಜನೆಗಳು
*ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:*
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳುಪರದೆ, ಪ್ಯಾಕ್ ಹೌಸ್ ಮತ್ತು ತಳ್ಳುವಗಾಡಿ, ಮಿನಿ ಟ್ರಾö್ಯಕ್ಟರ್ (20 ಪಿಟಿಒ ಹೆಚ್ಪಿ)ವಿವಿಧ ಘಟಕಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ.
*ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ):
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.55 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ.
*ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆ:
ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ.
ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸಲಾಗುವ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತ ವರ್ಗಕ್ಕೆ ಶೇ.15, ವಿಕಲಾಂಗಚೇತನ ವರ್ಗದವರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸಹಾಯಧನ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.