ಬೆಂಗಳೂರು : ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.
ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕಗೊಳಿಸಲು ನೂತನ ತಂತ್ರಾಂಶ ಜಾರಿಯಾಗಲಿದೆ. ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದಿದ್ದಾರೆ.