ಬೆಂಗಳೂರು : ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ “ವಾಣಿಜ್ಯ ಮೇಳ – ಸಾವಯವ ಮತ್ತು ಸಿರಿಧಾನ್ಯ – 2025″ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ. ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿರುತ್ತದೆ. ‘ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ’: ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ನಮ್ಮ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ.
ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಸಿರಿಧಾನ್ಯ ಉತ್ಪಾದನೆಯಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ. “ಸಾವಯವ ಕೃಷಿ ನೀತಿ”: ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವ ಆಹಾರ ರಫ್ತಿನಿಂದ ಸುಮಾರು 4,008 ಕೋಟಿ ರೂ.ಗಳಷ್ಟು ಆದಾಯ ಬಂದಿದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿ ಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ ಎಂದರು.
‘ಸಿರಿಧಾನ್ಯ ಉತ್ಪಾದನೆ -ಕರ್ನಾಟಕ 3ನೇ ಸ್ಥಾನ’:
ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್ಗಳಷ್ಟು… pic.twitter.com/Ya6wkVnxy2— Siddaramaiah (@siddaramaiah) January 23, 2025