ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ 5 ಸಾವಿರ ಹೆಚ್ಚಳ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 26,000ದಿಂದ 32,000 ಇದೆ. ಸದ್ಯ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಅನುಕೂಲ ಸಮಾನವಾಗಿ ದೊರಕಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರು 60ನೇ ವರ್ಷಕ್ಕೆ ನಿವೃತ್ತಿಗೊಂಡ ನಂತರವೂ ಅವರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ₹ 5 ಲಕ್ಷ ಧನಸಹಾಯ ನೀಡುವ ಯೋಜನೆ ರೂಪಿಸಿದೆ.ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದವರಿಗೆ, ಅವರು 60ನೇ ವರ್ಷಕ್ಕೆ ನಿವೃತ್ತರಾಗುವ ವೇಳೆ ₹ 5 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹ 72 ಕೋಟಿ ನಿಗದಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.