ಬೆಂಗಳೂರು : ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.