ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 36,789 ಮನೆಗಳನ್ನು ಇಂದು ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡ 36,789 ಮನೆಗಳ ಲೋಕಾರ್ಪಣೆ, ಮನೆ ಹಂಚಿಕೆ, ಹಕ್ಕುಪತ್ರ ವಿತರಣಾ ಸಮಾರಂಭ ಇಂದು ನಡೆದಿದೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 36,789 ಮನೆಗಳನ್ನು ಇಂದು ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ರೂ.1.50 ಲಕ್ಷ ಮತ್ತು ರಾಜ್ಯ ಸರ್ಕಾರದ ಪಾಲು 4.೦೦ ಲಕ್ಷ ರೂಪಾಯಿ. ಆರ್ಥಿಕ ಸಮಸ್ಯೆಯಿಂದಾಗಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಭರಿಸಲು ಸಾಧ್ಯವಾಗದೆ ಇದ್ದುದ್ದರಿಂದ ಅವರ ಪಾಲಿನ ರೂ.4.50 ಲಕ್ಷ ವಂತಿಗೆ ಬದಲಾಗಿ ಕೇವಲ ರೂ.1 ಲಕ್ಷ ವಂತಿಗೆ ಪಡೆದು ಉಳಿದ 3.50 ಲಕ್ಷ ರೂಪಾಯಿ ಹಣವನ್ನು ರಾಜ್ಯ ಸರ್ಕಾರವೇ ಭರಿಸಿದೆ. ನಾಡಿನ ಸೂರು ರಹಿತ ಬಡಕುಟುಂಬಗಳಿಗೆ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.