ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.
ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.
ಈಗಾಗಲೇ 2 ಕಂತಿನ ಹಣವನ್ನು ಅರ್ಹ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದ್ದು, ಹಣ ಜಮೆ ಆಗಿರುವ ಕುರಿತಂತೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಸಂದೇಶ ಬಂದವರ ಖಾತೆಗೆ ರಾಜ್ಯ ಸರ್ಕಾರದಿಂದ ಅರ್ಹ ಫಲಾನುಭವಿ ಯಜಮಾನಿ ಮಹಿಳೆಯರ ಜಮಾ ಮಾಡಲಾಗಿದೆ.
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ..
ಆನ್ಲೈನಲ್ಲಿ ಕರ್ನಾಟಕ ಸರ್ಕಾರದ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಈ ಲಿಂಕ್ ಮೂಲಕ ಪರೀಶಿಲನೆ ಮಾಡಬಹುದಾಗಿದೆ. https://ahara.kar.nic.in ಇದರಲ್ಲಿ ಕೂಡ ಚೆಕ್ ಮಾಡಬಹುದಾಗಿದೆ.