alex Certify ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 3 ಕಂತು ಹಣ ಬರದಿದ್ರೆ ಒಟ್ಟಿಗೆ ಜಮಾ ಆಗುತ್ತೆ 6 ಸಾವಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 3 ಕಂತು ಹಣ ಬರದಿದ್ರೆ ಒಟ್ಟಿಗೆ ಜಮಾ ಆಗುತ್ತೆ 6 ಸಾವಿರ

ಬೆಂಗಳೂರು : ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ವರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಇನ್ನೊಂದು ವಾರದೊಳಗೆ ಅದಾಲತ್ ಆರಂಭಿಸಿ ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಅಡ್ಡಿಗಳನ್ನು ಶೀಘ್ರ ಪರಿಹರಿಸಲಾಗುವುದು, ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು.

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...