ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆಗಸ್ಟ್ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ತಿಂಗಳಿನ ಹಣ ಒಟ್ಟಿಗೆ ಜಮಾ ಆಗಲಿದೆ.
ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿದೆ.
ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು. ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.