ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ಒದಗಿಸಲು ರಾಜ್ಯದ 15 ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ ಐ ಸ್ಕ್ಯಾನ್ ಹಾಗೂ 5 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇವೆಗಳನ್ನು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವರು, ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು, ಚಿತ್ರದುರ್ಗ ಜಿಲ್ಲಾಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಇಂದಿರಾನಗರದ ಸಿ.ವಿ.ರಾಮನ್ ಆಸ್ಪತ್ರೆ, ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು, ಮೈಸೂರು, ಉಡುಪಿ, ವಿಜಯನಗರ, ಚಿಕ್ಕೋಡಿ, ಅರಸೀಕೆರೆ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಬಾಗಲಕೋಟೆ, ರಾಮನಗರ, ಯಾದಗಿರಿ ಸೇರಿದಂತೆ 15 ಆಸ್ಪತ್ರೆಗಳಲ್ಲಿ 47.41 ಕೋಟಿ ರೂ. ವೆಚ್ಚದಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.