ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಗಳಿಗೆ ಬಲ ತುಂಬಲು 100 ಕೋಟಿ ರೂ. ಅನುದಾನ ನೀಡಲಾಗುವುದು. ಈಗಾಗಲೇ ವಾರ್ಡ್ ಗೊಂದು ಇರುವ ಕ್ಯಾಂಟಿನ್ ಅನ್ನು ಬಿಬಿಎಂಪಿಯ ಹೊಸ ವಾರ್ಡ್ ಗಳಲ್ಲಿಯೂ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಮೆನುವಿನೊಂದಿಗೆ ಜನರಿಗೆ ರುಚಿ, ಶುಚಿ ಹಾಗೂ ಪ್ರಮಾಣ ಖಾತರಿಯೊಂದಿಗೆ ಊಟ, ತಿಂಡಿ ಜೊತೆಗೆ ರಾಗಿ ಮುದ್ದೆ, ಜೋಳದ ರೊಟ್ಟಿ ಪೂರೈಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.