ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ರಾಜ್ಯ ಸರ್ಕಾರವು 30 ವರ್ಷ ಮೇಲ್ಪಟ್ಟವರಿಗೆ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತರಲು ಸಿದ್ದತೆ ನಡೆಸಿದೆ.ಆರೋಗ್ಯ ಇಲಾಖೆ ಅಧಿಕಾರಿಗಳು ರಾಮನಗರ ಮತ್ತು ದಕ್ಷಿಣ ಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ಮುಂದಿನ ವರ್ಷದ ಜನವರಿ ವೇಳೆಗೆ ಮೊದಲ ಹಂತದ ತಪಾಸಣೆ ಮತ್ತು ಔಷಧ ಖರೀದಿ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಸೋಮವಾರ, ಬುಧವಾರ, ಶುಕ್ರವಾರದಂದು ತಲಾ20 ಮನೆಗಳಿಗೆ ಭೇಟಿ ನೀಡಿ ಔಷಧಿಗಳನ್ನು ಪೂರೈಸಲಿದೆ.
ಮಧುಮೇಹ, ರಕ್ತದೊತ್ತಡ ಶಂಕಿತ ಪ್ರಕರಣಗಳನ್ನು ಹೊಂದಿರುವ ಜನರು ವೈದ್ಯರಿಂದ ಮಾಹಿತಿ ಪಡೆಯುತ್ತಾರೆ. ರೋಗ ಧೃಡವಾದರೆ ಮೂರು ತಿಂಗಳವರೆಗೆ ಔಷಧಿಗಳನ್ನು ಪಡೆಯುತ್ತಾರೆ. ಮೊದಲು ವೈದ್ಯಾದಿಕಾರಿಗಳು, ಸಿಹೆಚ್ ಒಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು , ಸಿಬ್ಬಂದಿಗಳಿಗೆ ಸರ್ಕಾರ ತರಬೇತಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಸರ್ಕಾರ ಈ ಯೋಜನೆ ಆರಂಭಿಸಿದರೆ ಬಡವರಿಗೆ ಮನೆಯಲ್ಲೇ ಉತ್ತಮ ಆರೋಗ್ಯ ಸೇವೆ ಸಿಕ್ಕಂತಾಗುತ್ತದೆ.