ಬೆಂಗಳೂರು : ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎಂಬಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
2-3 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣದ ನಡುವೆ ಚಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆಯಾಗುತ್ತಿದ್ದಂತೆ ಬಿರು ಬಿಸಿಲಿನ ವಾತಾವರಣ ಮುಂದುವರೆದಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಾತ್ರ ಮಳೆ ಸುರಿಯುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಫೆ.21 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.