ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗಿದ್ದು, ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬ ವಿಚಾರ ಸುಳ್ಳು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬುದು ಸುಳ್ಳು ಸುದ್ದಿ, ವಿದ್ಯುತ್ ಕಡಿತ ಮಾಡಲಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.
ಥರ್ಮಲ್ ವಿದ್ಯುತ್ ಘಟಕಗಳು ದುರಸ್ತಿಯಲ್ಲಿದೆ. ಮಳೆ ಹೆಚ್ಚಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆಯೂ ಹೆಚ್ಚಾಗಿದೆ. ಇಂದು ನಿಗದಿಗಿಂತ 100 ಯೂನಿಟ್ ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.