ಬೆಂಗಳೂರು: ಮಳೆ ಕೊರತೆಯಿಂದಾಗಿ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ನೆಮ್ಮದಿಯ ಸುದ್ದಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಉಂಟಾಗಿರುವ ವಿದ್ಯುತ್ ಅಭಾವವನ್ನು ಸರಿಪಡಿಸಲು ಉತ್ತರ ಪ್ರದೇಶ ಸೇರಿದಂತೆ ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಪ್ರಯತ್ನಿಸಲಾಗುತ್ತಿದೆ. ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಸೃಷ್ಟಿಯಾಗಿದೆ. 1500 ಮೆಗಾವಾಟ್‌ನಷ್ಟು ಕೊರತೆಯಾಗಿದೆ ಎಂದರು.
ವಿದ್ಯುತ್ ಉಪಕೇಂದ್ರಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ. 1200 ಮೆಗಾವಾಟ್ ಸೌರ ಇಂಧನ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ. ಸೌರ ಘಟಕಗಳನ್ನು ನಿರ್ಮಿಸಲು ಸರ್ಕಾರಿ ಭೂಮಿಯನ್ನು ಸಹ ಕೇಳಿದ್ದೇವೆ. ಗುತ್ತಿಗೆಗೆ ಭೂಮಿ ನೀಡುವಂತೆ ರೈತರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.