alex Certify BREAKING : ‘ಧಾರ್ಮಿಕ ದತ್ತಿ ಇಲಾಖೆ’ಯ ಅರ್ಚಕರಿಗೆ ಗುಡ್ ನ್ಯೂಸ್ : 77.85 ಕೋಟಿ ರೂ. ಗೌರವ ಭತ್ಯೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಧಾರ್ಮಿಕ ದತ್ತಿ ಇಲಾಖೆ’ಯ ಅರ್ಚಕರಿಗೆ ಗುಡ್ ನ್ಯೂಸ್ : 77.85 ಕೋಟಿ ರೂ. ಗೌರವ ಭತ್ಯೆ ಬಿಡುಗಡೆ

ಬೆಂಗಳೂರು : ಹಿಂದೂ ದೇವಾಲಯಗಳ  ಧಾರ್ಮಿಕ ದತ್ತಿ ಇಲಾಖೆ’ಯ ಅರ್ಚಕರಿಗೆ ನೀಡುವ 2023-24 ನೇ ಸಾಲಿನ ಗೌರವ ಭತ್ಯೆಯನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ.

ಮೊದಲ ಕಂತಿನಲ್ಲಿ 77.85 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ತಹಶೀಲ್ದಾರ್ ಗಳು ಯಾವುದೇ ಕಂಡೀಷನ್ ಹಾಕದೇ ಆಯಾ ಧಾರ್ಮಿಕ ಸಂಸ್ಥೆಗಳ ಮೂಲಕ ಅರ್ಚಕರ ಖಾತೆಗೆ ನೇರವಾಗಿ ಹಣ ಜಮಾ ಮಾಡುವಂತೆ ಸೂಚನೆ ನೀಡಿದೆ.

ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಹೊಸ ನೀತಿ ಜಾರಿಗೆ

ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಹೊಸ ನೀತಿ ಜಾರಿಗೆ ತರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಹೊಸ ಪರಿಸರ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಫಲ ಅವಕಾಶಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಈ ನಿಟ್ಟಿನಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಯಾವ ಪ್ರದೇಶ ಮತ್ತು ಸ್ಥಳಗಳಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬಹುದು ಎಂಬುದನ್ನು ಪಟ್ಟಿ ಮಾಡಿ ಕರಡು ನೀತಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನು ಕೂಡ ಪರಿಸರ ಪ್ರವಾಸೋದ್ಯಮದ ಭಾಗವಾಗಿಸುವ ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...