ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ” ಗಳನ್ನು ಪಡೆದುಕೊಳ್ಳಬಹುದಾಗಿದೆ.
ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ” ಗಳಂತಹ ಪ್ರಾಮುಖ್ಯ ಸೇವೆಗಳನ್ನು ಮತ್ತಷ್ಟು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
ಅದರಂತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚತಂತ್ರ 2.0 ತಂತ್ರಾಂಶವನ್ನು ನಾಡಕಛೇರಿ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಲಾಗಿದೆ, ಸಾರ್ವಜನಿಕರು ಇನ್ನೂ ಮುಂದೆ ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಡಿ ಬರುವ “ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ” ಗಳಂತಹ ಪ್ರಾಮುಖ್ಯ ಸೇವೆಗಳನ್ನು ಮತ್ತು ಇನ್ನೂ ಮುಂತಾದ 44 ಅಟಲ್ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಅರ್ಜಿ ಸಲ್ಲಿಸಿ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸದರಿ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
![](https://kannadadunia.com/wp-content/uploads/2024/01/1-4.jpg)
![](https://kannadadunia.com/wp-content/uploads/2024/01/2-3.jpg)
![](https://kannadadunia.com/wp-content/uploads/2024/01/3-2.jpg)