alex Certify ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು  : ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ (ನೇರಸಾಲ) ಯೋಜನೆ., ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕ / ಯುವತಿಯರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವ ಸಿಂಧು ಪೊರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವ್ಯಶಕತೆ ಇರುವುದಿಲ್ಲ. ನಿಗಮದ ವ್ಯಾಪ್ತಿಗೆ ಒಳಪಡುವ ಉಪಜಾತಿ ಹಾಗೂ ಯೋಜನೆಗಳ ಷರತ್ತು ನಿಬಂಧನೆಗಳಿಗೆ ಒಳಪಡುವ ಫಲಾಪೇಕ್ಷಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ನಿಯಮಗಳನ್ವಯ ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ನಗರ ಜಿಲ್ಲೆ, #21, ವೆಂಕಟಪ್ಪ ರಸ್ತೆ, ಕ್ವೀನ್ಸ್ ರಸ್ತೆ, ಟಸ್ಕರ್ ಟೌನ್, ಬೆಂಗಳೂರು-560 051 ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ / ಎಸ್.ಟಿ ಸಹಾಯವಾಣಿ ಸಂಖ್ಯೆ : 9482300400 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...