ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇಂದಿನಿಂದ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ಸಿಗಲಿದೆ.
ಹೌದು. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದರು. ಆದ್ದರಿಂದ ಇಂದಿನಿಂದ ಮಕ್ಕಳಿಗೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ಸಿಗುವ ನಿರೀಕ್ಷೆಯಿದೆ.
ಸೆಪ್ಟೆಂಬರ್ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದರು.
ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಯ್ ಪ್ರೇಮ್ ಜೀ ಪ್ರತಿಷ್ಠಾನ ಭರಿಸಲಿದೆ. ಈ ಸಂಬಂಧ ರಾಜ್ಯ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ವಾರದಲ್ಲಿ ಎರಡು ದಿನ ಸರ್ಕಾರದಿಂದ, 4 ದಿನ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನದಿಂದ ಮೊಟ್ಟೆ ವಿತರಿಸುವ ಕುರಿತಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ.ಪೂರಕ ಪೌಷ್ಟಿಕ ಆಹಾರ ನೀಡಲು ಮೂರು ವರ್ಷಗಳಿಗೆ ಅಜೀಮ್ ಪ್ರೇಮ್ ಜೀ ಫೌಂಡೇಶನ್ ಗೆ ಸುಮಾರು 1,500 ಕೋಟಿ ರೂ. ವೆಚ್ಚವಾಗಲಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತದೆ.