alex Certify ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕಿನ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.

ಅಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...