ಬೆಂಗಳೂರು : ನಾಡಿನ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
“ನೇಕಾರರ ಸಮೃದ್ಧ ಬದುಕಿಗೆ ಹೊಂಬೆಳಕು” ನಾಡಿನ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರಯವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ಹಾಗೂ 10 ರಿಂದ 20 ಹೆಚ್.ಪಿ ಹೊಂದಿರುವವರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಕೆ, ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹತ್ತು ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಕಾಯಕ ಜೀವಿಗಳ ಸರ್ವತೋಮುಖ ಪ್ರಗತಿ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು
ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸುವ, ಮನುಸ್ಮೃತಿ ಪರವಾದ ಮಾತಗಳನ್ನು ಆಡುತ್ತಿದೆ.
ಬಿಜೆಪಿ ಪಕ್ಷದ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ನಮ್ಮ ಸಂವಿಧಾನ ಹೋದರೆ ನಾಡಿನ ಜನರ, ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ನಮ್ಮ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ಬಿಜೆಪಿ ನಾಯಕರು ಬಿಟ್ಟಿಭಾಗ್ಯ ಎಂದು ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಹೀನ ಮಾತುಗಳಿಂದ ಅವಮಾನಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.