ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೌದು, ಮಹಿಳೆಯರ ಮೇಲಿನ ಕೌಟುಂಬಿಕ, ಲೈಂಗಿಕ ದೌರ್ಜನ್ಯ ಸೇರಿ ವಿವಿಧ ಪ್ರಕರಣಗಳಲ್ಲಿ ದೂರು ನೀಡಲು ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲಾಗುವುದು” ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಆಯೋಗಕ್ಕೆ ದೂರು ಸಲ್ಲಿಸಲು ಜಿಲ್ಲಾ ಹಂತದಲ್ಲಿ ವ್ಯವಸ್ಥೆಯಾದರೆ ಇನ್ನೂ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿಯೇ 1 ಸೆಲ್ ಸ್ಥಾಪಿಸಿ ಸಿಬ್ಬಂದಿ ನಿಯೋಜಿಸಲಾಗುವುದು. ಬಾಲಕಿಯರು, ಮಹಿಳೆಯರ ಮೇಲೆ ದೌರ್ಜನ್ಯ, ನಾಪತ್ತೆ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು, ಮಹಿಳಾ ಮತ್ತು ಮಕ್ಕಳ ಇಲಾಖೆ, ರೈಲ್ವೆ ಇಲಾಖೆ ಸೇರಿ ಇತರೆ ಇಲಾಖೆಗಳನ್ನು ಒಳಗೊಂಡ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.