ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣ (Free Bus Travel) ಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ಆರಂಭವಾಗಲಿದೆ.
ನಾಳೆಯೇ ಶಕ್ತಿ ಯೋಜನೆ (Shakthi Yojane) ಗೆ ಅಧಿಕೃತ ಚಾಲನೆ ಸಿಗಲಿದ್ದು, ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯನವರೇ ಸ್ವತಃ ಟಿಕೆಟ್ ನೀಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಬಸ್ ನಲ್ಲಿ ಪ್ರಯಾಣ ಮಾಡಲಿದ್ದಾರೆ.
ರಾಜ್ಯದಲ್ಲಿ ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾಗಲಿದೆ. ಬಿಎಂಟಿಸಿ ಸೇರಿ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದು, ರಾಜಹಂಸ, ಐಷಾರಾಮಿ, ಎಸ್ ಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಗಳಲ್ಲಿ ಉಚಿತ ಪ್ರಯಾಣವಿಲ್ಲ. ಸ್ಮಾರ್ಟ್ ಕಾರ್ಡ್ ಬರೋವರೆಗೆ ಸರ್ಕಾರಿ ಗುರುತಿನ ಚೀಟಿ ಕಂಡಕ್ಟರ್ಗೆ ತೋರಿಸಿ ಪ್ರಯಾಣಿಸಬೇಕು.