ಬೆಂಗಳೂರು : ST ಸಮುದಾಯದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಉಚಿತ ಡ್ರೋನ್ ತರಬೇತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
5 ಸಾವಿರ ST ಯುವಕ-ಯುವತಿಯರಿಗೆ ಡ್ರೋನ್ ತರಬೇತಿ ನೀಡಲಾಗುತ್ತದೆ. ವಿವಿ ಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ವಿದ್ಯಾರ್ಥಿಗಳಿಗೆ 25 ಸಾವಿರ ಶಿಷ್ಯ ವೇತನ ನೀಡಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.