alex Certify ರಾಜ್ಯದ ಯುವಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗ ಕಲ್ಪಿಸುವ ಮತ್ತೊಂದು ಯೋಜನೆ ಜಾರಿಗೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಯುವಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗ ಕಲ್ಪಿಸುವ ಮತ್ತೊಂದು ಯೋಜನೆ ಜಾರಿಗೆ..!

ಬೆಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.
ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವೆನಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ ವಿದೇಶದಲ್ಲಿ ಉದ್ಯೋಗ ದೊರೆತಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...