ಬೆಂಗಳೂರು : ಹೊಸ ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಸಂಬಂಧ ಆಹಾರ ಮತ್ತು ನಾಗರಿಕ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಏಪ್ರಿಲ್ 1 ರಿಂದ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ವಿವರಣೆ ಕುರಿತು ಸದನದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಚ್.ಮುನಿಯಪ್ಪ, ಪ್ರಸ್ತುತ ಸದ್ಯಕ್ಕೆ ಸ್ಥಗಿತವಾಗಿರುವ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಪುನಃ 1 ಏಪ್ರಿಲ್ 2024 ರಿಂದ ಪ್ರಾರಂಭವಾಗಲಿದೆ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.