alex Certify ʻಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

ಬೆಂಗಳೂರು :  ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...