ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಪೊಲೀಸ್ ವಸತಿ ಸಂಕಿರ್ಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ.ಜಿ. ಪರಮೇಶ್ವರ್ ಅವರು, 1 ಲಕ್ಷ ಜನರಿಗೆ 162 ಪೊಲೀಸರು ಬೇಕು. ಆದರೆ, ಕಳೆದ ನಾಲ್ಕು ವರ್ಷದಿಂದ ಇಲಾಖೆಯಲ್ಲಿ ಯಾವುದೇ ಹುದ್ದೆಗಳ ಭರ್ತಿಯಾಗಿಲ್ಲ. ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಸಿಹಿಸುದ್ದಿ ಕೊಟ್ಟಿರುವ ರಾಜ್ಯ ಸರ್ಕಾರ, ವೇತನ ತಾರತಮ್ಯ ನಿವಾರಣೆ ದೃಷ್ಟಿಯಿಂದ ಔರಾದ್ಕರ್ ವರದಿಯನ್ವಯ ಪೊಲೀಸರ ವೇತನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.