alex Certify ಹೊಸ `BPL, APL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ `BPL, APL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಹಾಸನ : ಬಿಪಿಎಲ್. ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರು ಅರ್ಹರಿರುತ್ತಾರೋ ಅವರಿಗೆ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ಕೊಡಲಿದ್ದೇವೆ, ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ’ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ  ಬಿಪಿಎಲ್ ಕಾರ್ಡ್ ಗೆ  3 ಲಕ್ಷ ಅರ್ಜಿ ಬಂದಿದ್ದವು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿಯೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ, ಅರ್ಹ ಜನರಿಗೆ ಯಾವುದೇ ತೊಂದರೆ ಆಗಲ್ಲ . ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...