ಬೆಂಗಳೂರು : ಬಿಪಿಎಲ್ ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾರ್ಡ್ ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಯಸಿ ಹೊಸದಾಗಿ 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 1.28 ಕೋಟಿ ಕೋಟಿ ಬಿಪಿಎಲ್ ಕಾರ್ಡ್ ಗಳು ಹಂಚಿಕೆಯಾಗಿವೆ ಎಂದು ತಿಳಿಸಿದ್ದಾರೆ.
ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಮಾಡಲಾಗುತ್ತಿದ್ದು, ಪರಿಶೀಲನೆ ನಂತರ ಹಣಕಾಸು ಅನುಮತಿ ಪಡೆದು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.