ಬೆಂಗಳೂರು : ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳೊಳಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದೆ.
ರಾಜ್ಯದಲ್ಲಿ ಹೊಸದಾಗಿ ಒಟ್ಟು 2.95 ಲಕ್ಷ ಮಂದಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಹರಿಗೆ ಶೀಘ್ರದಲ್ಲೇ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ. 5 ರಿಂದ 13 ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ. ಅಕ್ಟೋಬರ್ 5 ರಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು.
ಅ.11 ರಿಂದ 13 ರವರೆಗೆಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.