ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ಕೊಡಲು ನಿರ್ಧಾರ ಮಾಡಿದ್ದೇವೆ. ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರಂದಿಗೆ ಮಾತನಾಡಿದ ಅವರು,ವೈದ್ಯಕೀಯ ಸೌಲಭ್ಯಕ್ಕೆ ಆದ್ಯತೆ ನೀಡಿದ್ದೇವೆ, ಕೆಲವರು ವೈದ್ಯಕೀಯ ಸೌಲಭ್ಯಕ್ಕೆ ಮಾತ್ರ ಕಾರ್ಡ್ ಕೇಳುತ್ತಿದ್ದಾರೆ. ಹೊಸ ಕಾರ್ಡ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್ನಲ್ಲಿ 5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ನಗದು ಮೊತ್ತ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ತಾಂತ್ರಿಕ ಸಮಸ್ಯೆಗಳು ಬಗೆಹರಿಸಿದ್ದು, ಇನ್ನೊಂದು ವಾರದಲ್ಲಿ ಎಲ್ಲ ಅರ್ಹ ಲಾನುಭವಿಗಳ ಖಾತೆಗೆ ಪಾವತಿಯಾಗಲಿದೆ ಎಂದರು.
ತೆಲಂಗಾಣ ಮತ್ತು ಆಂಧ್ರಪ್ರದೇಶ ಕೆಜಿಗೆ 39 ರಿಂದ 40 ರೂ.ನಂತೆ ಪೂರೈಸಲು ಗ್ರೀನ್ ಸಿಗ್ನಲ್ ನೀಡಿವೆ. ನಿಖರ ಬೆಲೆ ತಿಳಿಸಿದ ನಂತರ ಸರ್ಕಾರ ಮುಂದಿನ ಕ್ರಮವಹಿಸಲಿದೆ ಎಂದು ಹೇಳಿದ್ದಾರೆ.