ಬೆಂಗಳೂರು :ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.