ಬೆಂಗಳೂರು : ಅನಧಿಕೃತ ಬಡಾವಣೆಗಳಲ್ಲಿ ಮನೆ ಕಟ್ಟಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಒಂದು ಬಾರಿಗೆ ದಂಡ ವಿಧಿಸಿ ಅಕ್ರಮ ಲೇಔಟ್ ಗಳಿಗೆ ಬಿ ಖಾತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬಿ ಖಾತೆ ನೀಡುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಂದು ಬಾರಿ ದಂಡ ವಿಧಿಸಿ ಬಿ ಖಾತೆಗೆ ಅವಕಾಶ ಕಲ್ಪಿಸಿದರೆ ರಾಜ್ಯ ಸರ್ಕಾರಕ್ಕೆ 2 ಸಾವಿರ ಕೋಟಿ ರೂ. ಆಧಾಯ ಬರಲಿದೆ. ಅಕ್ರಮ ಸಕ್ರಮ ಯೋಜನೆಗೆ ನ್ಯಾಯಲಯದ ತಡೆಯಾಜ್ಞೆ ಇದೆ. ಇದರಿಂದ ಎಲ್ಲ ಕಡೆ ಸಮಸ್ಯೆಯಾಗಿದೆ. ಶೀಘ್ರವೇ ಸಂಪುಟ ಉಪಸಮಿತಿ ರಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.