ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ
(ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50
1. ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)
2. ಕನಿಷ್ಠ ವಿದ್ಯಾರ್ಹತೆ – ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.
3. ವಯೋಮಿತಿ: ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ ಜುಲೈ 10 2024ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
4. ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
5. ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು
https://bcwd.karnataka.gov.in . ಮೂಲಕ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.07.2024.
ಸಹಾಯವಾಣಿ: (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)
ಅ) ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ.0824-2225078.
ಆ) ಉಡುಪಿ ಜಿಲ್ಲೆ: ದೂ.ಸಂ.0820-2574881.
ಇ) ಉತ್ತರ ಕನ್ನಡ: ದೂ.ಸಂ.08382-226589.